LATEST NEWS
ಭಾರತ್ ಬಂದ್ ವೇಳೆ ಕಾಂಗ್ರೇಸ್ ಕಾರ್ಯಕರ್ತರ ಗೂಂಡಾಗಿರಿ
ಭಾರತ್ ಬಂದ್ ವೇಳೆ ಕಾಂಗ್ರೇಸ್ ಕಾರ್ಯಕರ್ತರ ಗೂಂಡಾಗಿರಿ
ಮಂಗಳೂರು ಸೆಪ್ಟೆಂಬರ್ 10: ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೇಸ್ ಕರೆ ಕೊಟ್ಟಿರುವ ಭಾರತ್ ಬಂದ್ ಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ನಡುವೆ ಮಂಗಳೂರಿನಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಬಂದ್ ಹಿನ್ನಲೆಯಲ್ಲಿ ಗೂಂಡಾ ವರ್ತನೆ ತೋರಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರಿನ ಜ್ಯೋತಿ ವೃತ್ತದ ಬಳಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ವರ್ತನೆ ನೋಡಿ ಕಾರು ನಿಲ್ಲಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಕಾರಿನಿಂದ ಇಳಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾಂಗ್ರೇಸ್ ಕಾರ್ಯಕರ್ತರು ನಡೆಸುತ್ತಿರುವ ಬಲವಂತದ ಬಂದ್ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದರು.
ಬಂದ್ ಹಿನ್ನೆಲೆ, ಬಸ್ ಇಲ್ಲದ ಕಾರಣ, ಪ್ರಯಾಣಿಕರು ಆಟೋ ಹತ್ತಿದ್ದಕ್ಕೆ, ಪ್ರಯಾಣಿಕರನ್ನು ಆಟೋದಿಂದ ಇಳಿಸಿದ್ದಕ್ಕಾಗಿ, ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರು ಕಮೀಷನರ್ ಜೊತೆ ಮಾತಿಮ ಚಕಮಕಿ ನಡೆಸಿದ ಶಾಸಕ ವೇದವ್ಯಾಸ್ ಕಾಮತ್ ನಾವು ಪ್ರತಿಭಟನೆ ಮಾಡಿದರೆ ನಮ್ಮನ್ನ ಥಟ್ ಅಂತಾ ಅರೆಸ್ಟ್ ಮಾಡ್ತೀರಾ. ಆದ್ರೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರೆ, ಪ್ರಯಾಣಿಕರ ಮೇಲೆ ದಬ್ಬಾಳಿಕೆ ನಡೆಸಿದ್ರೆ ಅರೆಸ್ಟ್ ಮಾಡುವುದಿಲ್ಲ. ನಿಮಗೆ ಧಮ್ ಇದ್ರೆ ಅರೆಸ್ಟ್ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.