LATEST NEWS
ದಕ್ಷಿಣಕನ್ನಡ ಲೋಕಸಭಾ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ
ದಕ್ಷಿಣಕನ್ನಡ ಲೋಕಸಭಾ ಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ
ಮಂಗಳೂರು ಮಾರ್ಚ್ 25: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾಗಿ ಜಿಲ್ಲಾ ಯುವ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಮಿಥುನ್ ರೈ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ವಿವಿಧ ದೇವಾಲಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ನಗರದ ಪುರಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಿಥುನ್ ರೈ ಭಾಗವಹಿಸಿದರು.
ನಂತರ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರ ಜೊತೆ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ, ಸಚಿವ ಯು.ಟಿ.ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ ಮತ್ತು ಜೆಡಿಎಸ್ ಪ್ರತಿನಿಧಿಯಾಗಿ ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ನಾಮಪತ್ರ ಸಲ್ಲಿಸುವ ವೇಳೆ ಮಿಥುನ್ ರೈ ಅವರೊಂದಿಗೆ ಇದ್ದರು.
You must be logged in to post a comment Login