Connect with us

DAKSHINA KANNADA

ಸ್ವಾಮೀಜಿಗಳ ವಿರುದ್ಧ ಪೋಲೀಸ್ ಕೇಸು ದಾಖಲಿಸಲು ಕಾಂಗ್ರೇಸ್ ಒತ್ತಾಯ

ಸ್ವಾಮೀಜಿಗಳ ವಿರುದ್ಧ ಪೋಲೀಸ್ ಕೇಸು ದಾಖಲಿಸಲು ಕಾಂಗ್ರೇಸ್ ಒತ್ತಾಯ

ತಲೆ ಕಡಿಯಿರಿ, ಕೈ ಕಡಿಯಿರಿ ಎಂದು ಉದ್ರೇಕಕಾರಿ ಹೇಳಿಕೆ ನೀಡುವ ಸ್ವಾಮೀಜಿಗಳು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ವಕ್ತಾರ ವಂಕಪ್ಪ ಗೌಡ ಒತ್ತಾಯಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಜೀವನದಲ್ಲಿರುವ ವ್ಯಕ್ತಿಗಳು ಇಂಥ ಸ್ವಾಮೀಜಿಗಳ ಹಾಗೂ ಮುಖಂಡರ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣಕ್ಕಾಗಿ ಪೋಲೀಸರೇ ಇಂಥ ವ್ಯಕ್ತಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಪುತ್ತೂರಿನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಮಾತನಾಡಿದ ಅವರು ಉಡುಪಿಯಲ್ಲಿ ಭಾನುವಾರ ನಡೆದಂತಹ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಸ್ವಾಮೀಜಿಯೊಬ್ಬರು ಅನ್ನಧರ್ಮವನ್ನು ಹೀಯಾಳಿಸುವ ಕೆಲಸವನ್ನು ಮಾಡಿದ್ದಾರೆ. ಇನ್ನೊಬ್ಬರು ಗೋವನ್ನು ಕಡಿಯುವವರ ಕೈ ಕಡಿಯಿರಿ ಎನ್ನುವ ಹೇಳಿಕೆಗಳನ್ನು ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಈ ಸಂಬಂಧ ಪೋಲೀಸರು ಕೂಡಲೇ ಈ ರೀತಿಯ ಹೇಳಿಕೆ ನೀಡಿದವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ಉಡುಪಿಯಲ್ಲಿ ಧರ್ಮ ಸಂಸತ್ ನಡೆಸಲಾಗಿದೆ ಎಂದೂ ಆರೋಪಿಸಿದರು. ಸಚಿವ ವಿನಯ್ ಕುಲಕರ್ಣಿ ರಾಜೀನಾಮೆಯನ್ನು ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದ ಅವರು ಈ ರೀತಿಯ ಪ್ರತಿಭಟನೆ ಹಾಗೂ ಹೋರಾಟ ಮಾಡುವ ಮೂಲಕ ಸಾವಿಗೀಡಾದ ಬಿಜೆಪಿ ಕಾರ್ಯಕರ್ತ ಯೋಗೀಶ್ ಅವರ ಕುಟುಂಬಕ್ಕೆ ಬಿಜೆಪಿ ಪಕ್ಷ ನ್ಯಾಯ ಸಿಗದಂತೆ ಮಾಡುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. ಕಾಂಗ್ರೇಸ್ ಮುಖಂಡರಾದ ಮಹಮ್ಮದ್ ಬಡಗನ್ನೂರು, ಜೋಕಿಂ ಡಿಸೋಜಾ, ಮುರಳೀಧರ್ ರೈ, ಸೂತ್ರಬೆಟ್ಟು ಜಗದೀಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *