Connect with us

    LATEST NEWS

    ಉತ್ತರಪ್ರದೇಶ ಕಾಂಗ್ರೇಸ್ ಅಭ್ಯರ್ಥಿಯಾಗಿ ಮಿಸ್ ಬಿಕಿನಿ ಇಂಡಿಯಾ ಅರ್ಚನಾ….!! ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

    ಉತ್ತರಪ್ರದೇಶ: ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದ್ದು, ಕಾಂಗ್ರೇಸ್ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಿದ್ದು, ನಟಿ, ಮಾಡೆಲ್ ಅರ್ಚನಾ ಗೌತಮ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.


    ಇನ್ನು ಇವರ ಹೆಸರು ಘೋಷಣೆಯಾಗುತ್ತಿದ್ದಂತೆ ಮಿಸ್ ಬಿಕಿನಿ ಇಂಡಿಯಾ ವಿಜೇತೆಯಾಗಿದ್ದ ಅರ್ಚನಾ ಗೌತಮ್ ಅವರ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಭಾರೀ ಚರ್ಚೆಗೆ ಕಾರಣವಾಗಿದೆ.


    ಈ ಹಿನ್ನೆಲೆಯಲ್ಲಿ ನನ್ನ ಎರಡು ಪ್ರೋಪೆಷನ್‌ ಪರಸ್ಪರ ಬೆಸೆಯಬೇಡಿ ಎಂದು ಅರ್ಚನಾ ಗೌತಮ್ ಮನವಿ ಮಾಡಿದ್ದಾರೆ.


    ಈ ವಿಚಾರವಾಗಿ ಮಾತನಾಡಿದ ಅರ್ಚನಾ ಗೌತಮ್, ನಾನು ಮಿಸ್ ಬಿಕಿನಿ ಸ್ಪರ್ಧೆಯಲ್ಲಿ 2018ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ. ನಾನು 2014ರಲ್ಲಿ ಮಿಸ್ ಉತ್ತರ ಪ್ರದೇಶ ಮತ್ತು 2018ರಲ್ಲಿ ಮಿಸ್ ಕಾಸ್ಮೊ ವರ್ಲ್ಡ್ ಆಗಿದ್ದೆ. ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ನನ್ನ ವೃತ್ತಿಯನ್ನು ಒಂದೇ ಎಂದು ನೋಡಬೇಡಿ ಎಂದು ನಾನು ಜನರನ್ನು ವಿನಂತಿಸುತ್ತೇನೆ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply