Connect with us

  KARNATAKA

  ‘ಹಣದ ಆಸೆಗಾಗಿ ರೈತರ ಆತ್ಮಹತ್ಯೆ ಎಂದು ಕಾಂಗ್ರೆಸ್ ಸರಕಾರದ ಸಚಿವರ ಹೇಳಿಕೆ ದುರಂತಮಯ’: ಡಾ.ಭರತ್ ಶೆಟ್ಟಿ ವೈ

  ಮಂಗಳೂರು: ರಾಜ್ಯ ಸರ್ಕಾರ ಕೊಡುವ ಪರಿಹಾರದ ಹಣದ ಆಸೆಗಾಗಿ ರೈತರ ಆತ್ಮಹತ್ಯೆಗಳು ಆಗುತ್ತಿವೆ ಎಂದು ರಾಜ್ಯದ ಸಚಿವ ಶಿವಾನಂದ ಪಾಟೀಲ್ ಹೇಳಿರುವುದು ದುರಂತ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಹೇಳಿದ್ದಾರೆ.

  ಮಂಗಳೂರಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಬರಗಾಲದ ಸ್ಥಿತಿ ಇದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಜನರು ಗುಳೆ ಹೋಗುತ್ತಿದ್ದಾರೆ ರೈತರ ಬಗ್ಗೆ ಕಾಳಜಿ ತೋರದ ಸರಕಾರ ಬರ ಪರಿಹಾರ ಕಾರ್ಯದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
  ಸರ್ಕಾರದಲ್ಲಿ ಪರಿಶಿಷ್ಟರಿಗೆ ಹಾಗೂ ತೀರಾ ಹಿಂದುಳಿದ ವರ್ಗಕ್ಕೆ ಮೀಸಲು ಇರಿಸಿದ 11,000 ಕೋಟಿ ಅನುದಾನವನ್ನು ಗ್ಯಾರಂಟಿ ನೀಡಲು ಬಳಸಿಕೊಂಡಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ವರ್ಗದ, ದಲಿತ ವರ್ಗದ ಬಗ್ಗೆ ಮೊಸಳೆ ಕಣ್ಣೀರು ಮಾತ್ರ ಸುರಿಸಿರುತ್ತಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಖಜಾನೆ ಖಾಲಿಯಾಗಿ ಅಭಿವೃದ್ಧಿ ಮಾಡಲು ಅನುದಾನ ಕೇಳಿದರೆ ಮಾತನಾಡಬೇಡಿ ಎನ್ನುತ್ತಾರೆ. ಈ ಸರ್ಕಾರ ಅಭಿವೃದ್ಧಿ ಶೂನ್ಯ ಸರಕಾರ ಎಂದು ಲೇವಾಡಿ ಮಾಡಿದರು
  ಬಿಜೆಪಿ ಸರ್ಕಾರ ಆರಂಭಿಸಿದ ಹೊಸ ಯೋಜನೆಗಳನ್ನು ತನ್ನದೆಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರುಗಳಿಗೆ ಅಭಿವೃದ್ಧಿಗಾಗಿ ಎಷ್ಟು ಹಣ ನೀಡಿದ್ದಾರೆ ಎಂದು ಭಯಂಗಪಡಿಸಲಿ ಎಂದು ಸವಾಲು ಹಾಕಿದರು. ಸರ್ಕಾರ ಗೃಹಜೋತಿ ಯೋಜನೆಯನ್ನು ಶರತ್ತು ಹಾಕಿ ಅನುಷ್ಠಾನಗೊಳಿಸಿದೆ ಉಚಿತ ವಿದ್ಯುತ್ ನೀಡಲು ಅರಸಪಡುತ್ತಿದೆ ವಿದ್ಯುತ್ ಕ್ಷಾಮ ತಲೆದೂರಿದು ಹದಗೆಡುವ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು ಸರಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದರು.
  ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ ಸಂಜಯ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply