LATEST NEWS
ಸ್ಮಾರ್ಟ್ ಸಿಟಿಯ ಯೋಜನೆ ವಿಳಂಬ ಮಾಡುವ ಮೂಲಕ ಕಾಂಗ್ರೇಸ್ ಅಸೂಯೆ ರಾಜಕಾರಣ ಮಾಡುತ್ತಿದೆ – ನಳಿನ್

ಸ್ಮಾರ್ಟ್ ಸಿಟಿಯ ಯೋಜನೆ ವಿಳಂಬ ಮಾಡುವ ಮೂಲಕ ಕಾಂಗ್ರೇಸ್ ಅಸೂಯೆ ರಾಜಕಾರಣ ಮಾಡುತ್ತಿದೆ – ನಳಿನ್
ಮಂಗಳೂರು ಮೇ 3: ವಿಚಾರವಾದಿಯಂತೆ ಪೋಸ್ ನೀಡುತ್ತಿರುವ ಪ್ರಕಾಶ್ ರೈ ಮೊದಲು ಹಿಂದೂ ಧರ್ಮವನ್ನು ಅವಹೇಳನ ಮಾಡುವುದನ್ನು ನಿಲ್ಲಿಸಲಿ ಎಂದು ಸಂಸದ ನಳಿನ್ ಕುಮಾರ್ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಜೆ.ಆರ್ ಲೋಬೋ ಕೇಂದ್ರ ಸರಕಾರದ ಅನುದಾನದಿಂದ ನೆರವೇರಿಸಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ತನ್ನ ಸಾಧನೆ ಎಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಮಂಗಳೂರು ಅಭಿವೃದ್ದಿಗೆ 200 ಕೋಟಿ ರೂಪಾಯಿಯನ್ನು ನೀಡಿದ್ದರು ಆದರೆ ಕಾಂಗ್ರೆಸ್ ಸರಕಾರ ನೀಡಿದ್ದು ಕೇವಲ 58 ಕೋಟಿ ರೂಪಾಯಿ ಎಂದು ಕಿಡಿಕಾರಿದರು.
ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ಆಯ್ಕೆಯಾದರೂ ನಿಧಾನಗತಿಯ ಕಾಮಗಾರಿ ಮಾಡುವ ಮೂಲಕ ಕಾಂಗ್ರೆಸ್ ಅಸೂಯೆಯ ರಾಜಕಾರಣ ಮಾಡಿದೆ ಎಂದು ಆರೋಪಿಸಿದ ಸಂಸದ ನಳಿನ್ ಕುಮಾರ್, ಸ್ಮಾರ್ಟ್ ಸಿಟಿಯ ಯಾವುದೇ ಸಭೆಗಳಿಗೆ ಸಂಸದನಾದ ನನ್ನನ್ನು ಅಹ್ವಾನ ನೀಡಿಲ್ಲ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಆದರೆ ಕೇಂದ್ರ ಸರ್ಕಾರಕ್ಕೆ ಪ್ಲಸ್ ಆಗುವ ಸಾಧ್ಯತೆಯಿಂದ ಕಾಂಗ್ರೆಸ್ ಅಸೂಯೆಯಿಂದ ನಿಧಾನಗತಿ ಕಾರ್ಯ ಮಾಡಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಪೂರಕ ವಾತಾವರಣವಿದ್ದು . ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಪ್ರಚಾರ ಸಭೆ ನಡೆಸುವ ಮೂಲಕ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವುದಕ್ಕೆ ಪೂರಕವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.