LATEST NEWS
ಕಾಂಗ್ರೆಸ್ ಗ್ಯಾರಂಟಿ ಜಾರಿಯಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಯು ಟಿ ಖಾದರ್

ಮಂಗಳೂರು ಮೇ 08: ಕಾಂಗ್ರೇಸ್ ಪಕ್ಷ ಘೋಷಿಸಿರುವ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗದಿದ್ದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯು. ಟಿ ಖಾದರ್ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 200 ಯುನಿಟ್ ವಿದ್ಯುತ್, ಮನೆಯೊಡತಿಗೆ 2000 ರೂ. ಸೇರಿದಂತೆ ಐದು ಗ್ಯಾರೆಂಟಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಕಾಂಗ್ರೆಸ್ ಪಕ್ಷ ಘೋಷಿಸಿರುವ ಐದು ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಜಾರಿ ಮಾಡಲು ಸಾಧ್ಯವಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಾಗುವುದು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ ಹೇಳಿದ್ದಾರೆ.

ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಜಾರಿ ಮಾಡಲಾಗುವುದು. ಒಂದು ವೇಳೆ ಈ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ವಿಫಲವಾದರೆ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.