Connect with us

    LATEST NEWS

    ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೇಸ್

    ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೇಸ್

    ಮಂಗಳೂರು ಸೆಪ್ಟೆಂಬರ್ 23: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಸೆಡ್ಡು ಹೊಡೆಯಲು ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಪರಿಕಲ್ಪನೆಯಡಿ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

    ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು .ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಎಐಸಿಸಿ ಉಸ್ತುವಾರಿ ವಿಷ್ಣುನಾಥನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮನೆಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ನಗರದ ಶಿವಭಾಗ್ ನ ರಸ್ತೆಗಳಲ್ಲಿ ಸಂಚರಿಸಿದ ಕಾಂಗ್ರೆಸ್ ನಾಯಕರು ಅಲ್ಲಿಯ ಮನೆಮನೆಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಸಿದರು.

    ಸರಕಾರ ಪತನಗೊಳಿಸಲು ಬಿಜೆಪಿ ಅಡ್ಡಮಾರ್ಗ – ಸಚಿವ ತನ್ವೀರ್ ಸೇಠ್

    ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಫೋನ್ ಕದ್ದಾಲಿಕೆ ವಿಚಾರದಲ್ಲಿ ಬಿಜೆಪಿ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. ಬಿಜೆಪಿ ನಾಯಕರು ಸುಳ್ಳುಗಳ ಸರಮಾಲೆಯನ್ನೇ ಹೆಣೆಯುತ್ತಿದ್ದಾರೆ. ಬಿಜೆಪಿ ನಾಯಕರ ಬಗ್ಗೆ ನಮ್ಮಲ್ಲಿ ಕೂಡ ದಾಖಲೆಗಳಿವೆ. ಅವುಗಳನ್ನು ಸೂಕ್ತ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಅವರು ಹೇಳಿದರು. ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಅಡ್ಡಮಾರ್ಗ ಹಿಡಿಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು

    ವಿಡಿಯೋ

    Share Information
    Advertisement
    Click to comment

    You must be logged in to post a comment Login

    Leave a Reply