Connect with us

    KARNATAKA

    “ಹಿಂದೂ ಧರ್ಮದ ನಾಶಕ್ಕೆ ಕಾಂಗ್ರೆಸ್ ಹುನ್ನಾರ,ಮೋದಿ ಇರುವವರೆಗೂ ಸಾಧ್ಯವಿಲ್ಲ”;ಮೈಸೂರಿನಲ್ಲಿ ಮೋದಿ ಗುಡುಗು

    ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

    ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ‌ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ “ನಿಮಗೆಲ್ಲಾ ನನ್ನ ನಮಸ್ಕಾರಗಳು, ಚೈತ್ರ ನವಮಿಯ ದಿನ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ತಾಯಿ ಚಾಮುಂಡೇಶ್ವರಿ ಜೊತೆ, ತಾಯಿ ಭುವನೇಶ್ವರಿ ಮತ್ತು ತಾಯಿ ಕಾವೇರಿಗೆ ನಮಿಸುತ್ತೇನೆ” ಎಂದರು. ಕರ್ನಾಟಕದಲ್ಲಿ ಕಾಂಗ್ರೆಸ್ ತುಷ್ಠೀಕರಣ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನವನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ನವರು ಅಪಮಾನ ಮಾಡಿದೆ. ಇಂಡಿ ಮೈತ್ರಿ ಕೂಟವು ಸನಾತನ ಧರ್ಮವನ್ನು ನಾಶ ಮಾಡುತ್ತೇವೆ ಎನ್ನುತ್ತಾರೆ. ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ಘೋಷಿಸಿದರು.ರಾಜ್ಯ ಕಾಂಗ್ರೆಸ್ ಪಕ್ಷದ ಆಡಳಿತ ವೈಖರಿಯನ್ನೂ ತರಾಟೆಗೆ ತೆಗೆದುಕೊಂಡ ಮೋದಿ ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ, ಬಿಜೆಪಿಯಿಂದ ಮೋದಿಯೇ ಗ್ಯಾರಂಟಿ ಎಂದು ಹೇಳಿದರು. ಇದಕ್ಕೂ ಮೊದಲು ಇಡೀ ಭಾರತದಲ್ಲಿ ಅತ್ಯಂತ ಹೆಚ್ಚು ಅನುಭವಿ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಜೊತೆ ವೇದಿಕೆ ಹಂಚಿಕೊಂಡಿರುವುದು ನನ್ನ ಸೌಭಾಗ್ಯ ಅವರು ಹೇಳಿರುವುದನ್ನು ಸಂಪೂರ್ಣವಾಗಿ ಕೇಳಿಸಿಕೊಂಡೆ ಎಂದ ಪ್ರಧಾನಿ ಬಿಜೆಪಿಯಿಂದ ಪ್ರಾದೇಶಿಕ ಅಸ್ಮಿತೆ, ಕನ್ನಡ ಅಸ್ಮಿತೆಗೆ ಧಕ್ಕೆ ಬರುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೂ ತಿರುಗೇಟು ನೀಡಿದ ಅವರು, ಕನ್ನಡವು ಅತ್ಯಂತ ಸುಂದರವಾದ ಭಾಷೆಯಾಗಿದೆ. ಬಿಜೆಪಿ ಸರ್ಕಾರವು ಕನ್ನಡ ಭಾಷೆಯ ಬೆಳವಣಿಗೆಗೆ ಪೂರಕ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದೂ ತಿಳಿಸಿದರು.ಮೈಸೂರು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾಗಿದೆ. ಇಲ್ಲಿ ನಡೆಯುವ ದಸರಾ ಮಹೋತ್ಸವ ವಿಶ್ವವಿಖ್ಯಾತ ಆಗಿದೆ. ಕರ್ನಾಟಕದ ಹಂಪಿ, ಬಾದಾಮಿ ಮೊದಲಾದ ಐತಿಹಾಸಕ ತಾಣಗಳನ್ನು ವಿಶ್ವ ಪ್ರವಾಸೋದ್ಯಮ ಭೂಪಟದಲ್ಲಿ ಗುರುತಿಸುವಂತೆ ಮಾಡುವುದು ನಮ್ಮ ಗುರಿಯಾಗಿದೆ. ಇದರಿಂದಾಗಿ ಕರ್ನಾಟಕದಲ್ಲಿ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply