Connect with us

LATEST NEWS

ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್

ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಮೋದ್ ಮಧ್ವರಾಜ್

ಉಡುಪಿ ಮಾರ್ಚ್ 25: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಮೋಧ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಅವರು ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ವಿಜಯಕುಮಾರ್, ಮುಖಂಡ ಎಂ.ಎ.ಗಫೂರ್ ಇದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಮೋದ್ ಮಧ್ವರಾಜ್ ಈ ಹಿಂದೆ ಶಾಸಕನಾಗಿ ಕೆಲಸ ಮಾಡಿದ್ದೇನೆ, ಕೆಲಸ ಮಾಡುವವರು ಈ ಭಾರಿ ಉಡುಪಿ ಚಿಕ್ಕಮಗಳೂರಿಗೆ ಸಂಸದರಾಗಬೇಕೆಂಬದು ಜನರ ಅಭಿಪ್ರಾಯವಾಗಿದೆ ಎಂದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್‌ ಕಚೇರಿಯಲ್ಲಿ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ನಡೆಯಿತು.

VIDEO

Advertisement Advertisement
Click to comment

You must be logged in to post a comment Login

Leave a Reply