Connect with us

    LATEST NEWS

    ಹಿರಿಯ ಕಾಂಗ್ರೇಸ್ ನಾಯಕ ಜಾಫರ್​ ಷರೀಫ್ ಇನ್ನಿಲ್ಲ

    ಹಿರಿಯ ಕಾಂಗ್ರೇಸ್ ನಾಯಕ ಜಾಫರ್​ ಷರೀಫ್ ಇನ್ನಿಲ್ಲ

    ಬೆಂಗಳೂರು ನವೆಂಬರ್ 25 : ಕಾಂಗ್ರೇಸ್ ನ ಹಿರಿಯ ನಾಯಕ ಮಾಜಿ ರೈಲ್ವೆ ಸಚಿವ ಜಾಫರ್​ ಷರೀಫ್(85)​​ ಇಂದು ನಿಧನರಾಗಿದ್ದಾರೆ. ಕಾಂಗ್ರೇಸ್ ನ ಹಿರಿಯ ನಾಯಕ ಹಾಗೂ ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಮಾಜಿ ಪ್ರಧಾನಿ ನರಸಿಂಹ ರಾವ್ ಅವರ ಸಂಪುಟದಲ್ಲಿ ಕೇಂದ್ರ ರೈಲ್ವೆ ಸಚಿವರಾಗಿ ಕೆಲಸ ಮಾಡಿದ್ದರು. ಜಾಫರ್ ಷರೀಫ್​ ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಆಸ್ಪತ್ರೆಗೆ ಸೇರಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

    ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು 2 ದಿನಗಳ ಹಿಂದೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

    ಕೇಂದ್ರದ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಜಾಫರ್ ರಾಜ್ಯಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ತಂದಿದ್ದರು. ಬೆಂಗಳೂರಿನಲ್ಲಿ ರೈಲ್ವೆ ಗಾಲಿ, ಅಚ್ಚು ಕಾರ್ಖಾನೆ ಆರಂಭಕ್ಕೆ ಕಾರಣರಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply