Connect with us

LATEST NEWS

ಸೋನಿಯಾ ಗಾಂಧಿ ತಾಯಿ ವಿಧಿವಶ

ನವದೆಹಲಿ, ಆಗಸ್ಟ್ 31 : ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರ ತಾಯಿ ಇಟಲಿಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ.

ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು ಆಗಸ್ಟ್‌ 27 ಶನಿವಾರದಂದು ಇಟಲಿಯಲ್ಲಿರುವ ಅವರ ಮನೆಯಲ್ಲಿ ನಿಧನರಾದರು. ನಿನ್ನೆ ಅಂತ್ಯಕ್ರಿಯೆ ನಡೆಯಿತು ಎಂದು ಟ್ವೀಟ್‌ ಮಾಡಿದ್ದಾರೆ.

ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಕಳೆದ ವಾರ ಇಟಲಿಗೆ ತೆರಳಿದ್ದರು. ಸೋನಿಯಾ ಜೊತೆ ರಾಹುಲ್‌, ಪ್ರಿಯಾಂಕಾ ಗಾಂಧಿ ವಿದೇಶಕ್ಕೆ ತೆರಳಿದ್ದರು.

Advertisement
Click to comment

You must be logged in to post a comment Login

Leave a Reply