DAKSHINA KANNADA
ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಪಡೀಲ್ ಕಾಂಗ್ರೆಸ್ ಪಕ್ಷದ ಹುದ್ದೆಯಿಂದ ಅಮಾನತು
ಪುತ್ತೂರು ನವೆಂಬರ್ 09 : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನದಲ್ಲಿದ್ದು, ಕೊಲೆ ಆರೋಪ ಎದುರಿಸುತ್ತಿರುವ ಪುತ್ತೂರು ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಕೇಶವ ಪಡೀಲ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆಯಿಂದ ಉಚ್ಚಾಟನೆ ಮಾಡಲಾಗುವುದು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಹೇಳಿದ್ದಾರೆ.
ಅವರು ಈ ಬಗ್ಗೆ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ. ಹೀಗಾಗಿ ಅವರನ್ನು ಸಮರ್ಥಿಸುವ ಅಥವಾ ಬೆಂಬಲಿಸುವ ಪ್ರಶ್ನೆಯೇ ಇಲ್ಲ, ಕೊಲೆ ಆರೋಪ ಬಂದಿರುವ ಕಾರಣ ತಕ್ಷಣವೇ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ವಿಷಯ ತಿಳಿಸಿ ಎಸ್.ಸಿ. ಘಟಕದ ಅಧ್ಯಕ್ಷ ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ತಿಳಿಸಿದ್ದಾರೆ.