Connect with us

    LATEST NEWS

    ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಕಾಂಗ್ರೇಸ್ ನಾಯಕರು

    ಮಂಗಳೂರು ಜುಲೈ 22: ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೇಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ನೋಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳೂರಿಗೆ ಆಗಮಿಸಿ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು.


    ಆಸ್ಕರ್ ಆರೋಗ್ಯದ ಬಗ್ಗೆ ಪತ್ನಿ ಬ್ಲಾಸಮ್ ಮತ್ತು ಕುಟುಂ ಬಸ್ಥರ ಜೊತೆ ಡಿಕೆಶಿ ಹಾಗು ಸಿದ್ದರಾಮಯ್ಯ ಮಾತು ಕತೆ ನಡೆಸಿದರು. ಈ ವೇಳೆ, ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ಮಾಧ್ಯಮಗಳಲ್ಲಿ ಬರುತ್ತಿರುವಷ್ಟು ಆಸ್ಕರ್ ಅವರ ಆರೋಗ್ಯ ಹದಗೆಟ್ಟಿಲ್ಲ.

    ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಸಂದರ್ಭ ಆಸ್ಕರ್ ಅವರ ಆರೋಗ್ಯಸ್ಥಿತಿ ಕುರಿತು ಅವರ ಪತ್ನಿ ಬ್ಲಾಸಮ್ ಫರ್ನಾಂಡಿಸ್ ಹಾಗೂ ಆಸ್ಪತ್ರೆ ಹಿರಿಯ ವೈದ್ಯರ ಜತೆ ಸಮಾಲೋಚನೆ ನಡೆಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply