LATEST NEWS
ಕರಾವಳಿಯಲ್ಲಿ ಕಾಂಗ್ರೇಸ್ ದೂಳಿಪಟ
ಕರಾವಳಿಯಲ್ಲಿ ಕಾಂಗ್ರೇಸ್ ದೂಳಿಪಟ
ಮಂಗಳೂರು ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬಂದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ದೂಳಿಪಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಮಂಗಳೂರು ವಿಧಾನ ಸಭಾ ಕ್ಷೇತ್ರ ಮಾತ್ರ ಕೈ ವಶ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಎಲ್ಲಾ 5 ಸ್ಥಾನಗಳನ್ನು ಬಿಜೆಪಿ ಗಲ್ಲುವ ಮೂಲಕ ಕಾಂಗ್ರೆಸ್ ಅಸ್ಥತ್ವವನ್ನೆ ಕೊನೆಗಾಣಿಸಿದೆ.
ದಕ್ಷಿಣಕನ್ನಡ ಜಿಲ್ಲೆಯ ವಿಧಾನಸಭೆ ಚುನಾವಣಾ ಫಲಿತಾಂಸ 2013ರ ಫಲಿತಾಂಶವನ್ನು ನೆನಪಿಸಿದೆ. 2013ರ ಚುನಾವಣೆಯಲ್ಲಿ ಕಾಂಗ್ರೇಸ್ 7 ಸ್ಥಾನಗಳನ್ನು ಗೆದ್ದಿದ್ದರೆ ಬಿಜೆಪಿ 1 ಸ್ಥಾನ ಗೆದ್ದಿದೆ. ಈ ಬಾರಿ ಅದು ಸಂಪೂರ್ಣ ಉಲ್ಟಾ ಆಗಿದೆ. ಬಿಜೆಪಿ 7 ಸ್ಥಾನಗಳನ್ನು ಗೆದ್ದು ಕಾಂಗ್ರೇಸ್ ಒಂದು ಸ್ಥಾನವನ್ನು ಉಳಿಸಿಕೊಂಡಿದೆ.
ಸಚಿವ ರಮಾನಾಥ್ ರೈ ಸ್ಪರ್ಧಿಸಿದ್ದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಸಚಿವ ರಮಾನಾಥ್ ರೈ ಬಿಜೆಪಿಯ ರಾಜೇಶ್ ನಾಯ್ಕ್ ವಿರುದ್ಧ ಹೀನಯ ಸೋಲನುಭವಿಸಿದ್ದಾರೆ.
ಕಾಂಗ್ರೇಸ್ ನ ಭದ್ರಕೊಟೆಯಾಗಿದ್ದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿ ತನ್ನ ಅಧಿಪತ್ಯ ಸ್ಥಾಪಿಸಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅತ್ಯಂತ ಯುವ ಅಭ್ಯರ್ಥಿ ಹರೀಶ್ ಪೂಂಜಾ , ಕಾಂಗ್ರೆಸ್ ನ ಶಾಸಕ ವಸಂತ್ ಬಂಗೇರಾ ಅವರ ವಿರುದ್ದ ಗೆಲುವು ದಾಖಲಿಸಿ ಜೈಂಟ್ ಕಿಲ್ಲರ್ ಎನಿಸಿದ್ದಾರೆ.
ಕಾಂಗ್ರೆಸ್ ಕೈಯಲ್ಲಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಮೊಯ್ದೀನ್ ಬಾವ ಅವರ ವಿರುದ್ಧ ಸುಮಾರು 26,648 ಸಾವಿರ ಮತಗಳ ಅಂತರದಲ್ಲಿ ಭರತ್ ಶೆಟ್ಟಿ ಜಯ ದಾಖಲಿಸಿದ್ದಾರೆ.
ಬಿಜೆಪಿಯ ಭದ್ರಕೊಟೆಯನ್ನು ವಶಪಡಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೇಸ್ ನ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಎದುರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಶಕುಂತಳಾ ಶೆಟ್ಟಿಯವರು ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ವಿರುದ್ಧ ಪರಾಭವಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಅವರು ಕಾಂಗ್ರೆಸ್ ಅಭ್ಯರ್ಥಿ ಶಕುಂತಳಾ ಶೆಟ್ಟಿ ಅವರ ವಿರುದ್ದ 18946 ಮತಗಳ ಅಂತರದಿಂದ ಅಚ್ಚರಿಯ ಗೆಲುವು ದಾಖಲಿಸಿಕೊಂಡಿದ್ದಾರೆ.
ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಕೂಡ ಕಾಂಗ್ರೆಸ್ ಕೈ ತಪ್ಪಿದೆ. ಮಾಜಿ ಸಚಿವ ಹಾಗೂ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಹಾಗು ಕಾಂಗ್ರೆಸ್ ಅಭ್ಯರ್ಥಿ ಆಭಯ ಚಂದ್ರ ಜೈನ್ ಸೋಲನುಭವಿಸಿದ್ದಾರೆ. ಬಿಜೆಪಿಯ ಉಮಾನಾಥ್ ಕೋಟ್ಯಾನ್ 29,653 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಹಾಗು ಶಾಸಕ ಎಸ್ ಅಂಗಾರ ಗೆಲುವು ಸಾಧಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಂಗಾರ ಅವರು ಸತತ 6 ಬಾರಿ ಸುಳ್ಯ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದರೆ.