ಬೆಂಗಳೂರು ಡಿಸೆಂಬರ್ 14: ಕಾಂಗ್ರೇಸ್ ನ ಹಿರಿಯ ಶಾಸಕ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ.

ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 14) ಸಂಜೆ ಕೊನೆಯುಸಿರೆಳೆದಿದ್ದಾರೆ.
ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದ್ರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.



