
ಮಂಗಳೂರು ಜೂನ್ 10: ದಕ್ಷಿಣಕನ್ನಡ ಜಿಲ್ಲೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ಮಾತ್ರ ಎನ್‌ಐಎಗೆ ವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲೆಯಲ್ಲಿ ನಡೆದ ಇನ್ನಿಬ್ಬರು ಅಮಾಯಕರ ಹತ್ಯೆ ಪ್ರಕರಣಗಳ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಅವರಿಗೆ ಏಕೆ ಅನಿಸಿಲ್ಲ. ಅನುಸರಿಸುವ ಅವರ ಮನಸ್ಥಿತಿ ಎಂತಹದ್ದು ಎಂಬುದು ಗೊತ್ತಾಗುತ್ತದೆ ಎಂದು ಎಂಎಲ್ ಸಿ ಐವನ್ ಡಿಸೋಜಾ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರದ ಜೊತೆ ಚರ್ಚಿಸದೆಯೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿದೆ. ಕೇಂದ್ರ ಸರ್ಕಾರವು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ನೀತಿ ಅನುಸರಿಸಿದೆ’ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸಹಿತ ಬಿಜೆಪಿ ನಾಯಕರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ತಮಗೆ ಬೇಕಾದ ಮೃತರ ಮನೆಗೆ ಭೇಟಿ ನೀಡಿದ್ದಾರೆ. ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಪೋಲಿಸ್ ಇಲಾಖೆ ಬಗ್ಗೆ ಮಾತನಾಡಿದ್ದಾರೆ. ಇವರ ಆಡಳಿತದಲ್ಲಿ ಇದೇ ಪೊಲೀಸರು ಇಲ್ಲಿ ಇದ್ದರು. ಅವರು ಕಾನೂನು ಪ್ರಕಾರ ಹೋಗ್ತಾರೆ. ಅದನ್ನು ಬಿಟ್ಟುಕೆಲಸ ಮಾಡಿದ್ರೆ ಅವರ ಕೆಲಸ ಕಳೆದು ಕೊಳ್ತಾರೆ. ಬಿಜೆಪಿ ನಾಯಕರು ಪೊಲಿಸರು ಗೂಂಡಾ ವರ್ತನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.





