Connect with us

  DAKSHINA KANNADA

  ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​ಗೆ ಸಂಕಷ್ಟ ತಂದ ‘ಪ್ರತ್ಯೇಕ ರಾಷ್ಟ್ರ’.! ಮಂಗಳೂರು ಕೋರ್ಟಿನಲ್ಲಿ ದಾವೆ ಹೂಡಿದ ಬಿಜೆಪಿ ನಾಯಕ..!

  ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್  ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು  ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್​ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ  ಸಲ್ಲಿಸಿದ್ದಾರೆ.

  ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್  ಅವರ ಪ್ರತ್ಯೇಕ ರಾಷ್ಟ್ರದ ಹೇಳಿಕೆ  ಇದೀಗ ಸಂಕಷ್ಟ ತಂದೊಡ್ಡಿದ್ದು  ಈ  ವಿಚಾರ ರಾಷ್ಟ್ರ ಮಟ್ಟದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಡಿಕೆಸುರೇಶ್ ಕುಮಾರ್  ವಿರುದ್ದ ಕ್ರಮ ಕೈಗೊಳ್ಳುವಂತೆ  ಬಿಜೆಪಿ ಸೇರಿದಂತೆ ಅನೇಕ ಪಕ್ಷಗಳು ಒತ್ತಾಯಿಸಿವೆ. ಈ  ಮಧ್ಯೆ ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್  ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು  ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್​ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ  ಸಲ್ಲಿಸಿದ್ದಾರೆ.

  ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ವಿಕಾಸ್  ‘ಡಿ.ಕೆ ಸುರೇಶ್ ದೇಶ ವಿರೋಧಿ, ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳಲು ಮಂಗಳೂರು ಆಯುಕ್ತರಿಗೆ ಹಾಗೂ ಉತ್ತರ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ  ಜೊತೆಗೆ  ಮಂಗಳೂರು ನ್ಯಾಯಾಲಯದಲ್ಲೂ ದಾವೆ ಹೂಡಿದ್ದೇವೆ. ಡಿ.ಕೆ ಸುರೇಶ್ ಸಂಸದರಾಗಿದ್ದರೂ ಸಹ ಭಾರತವನ್ನು ವಿಭಜಿಸಬೇಕೆಂದಿದ್ದಾರೆ. ಈ ಮೂಲಕ ಪ್ರತ್ಯೇಕವಾದಿ ಶಕ್ತಿಗಳಿಗೆ ಕುಮ್ಮಕ್ಕು ಕೊಡುವ ಮೂಲಕ ದೇಶದ ಸಂವಿಧಾನಕ್ಕೆ ಅಗೌರವ ತೋರಿಸಿದ್ದಾರೆ. ಇದರಿಂದ ಪ್ರತ್ಯೇಕವಾದಿಗಳಿಗೂ ಡಿ.ಕೆ ಸುರೇಶ್ ಅವರಿಗೂ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ.

  ಹೀಗಾಗಿಯೇ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇನೆ. ಡಿ.ಕೆ ಸುರೇಶ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆಂಬ ಭರವಸೆ ಇದೆ. ಇದೇ 7ನೇ ತಾರೀಖಿಗೆ ಡೇಟ್ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply