LATEST NEWS
ಬಿಜೆಪಿ ಕಚೇರಿ ಮುತ್ತಿಗೆಗೆ ಹೊರಟ ಕಾಂಗ್ರೇಸ್ ಕಾರ್ಯಕರ್ತರನ್ನು ಕಂಕನಾಡಿಯಲ್ಲಿ ತಡೆದ ಪೊಲೀಸರು
ಮಂಗಳೂರು ಅಗಸ್ಟ್ 23: ಎಂಎಲ್‌ಸಿ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಿದ್ದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೇಸ್ ಕಾರ್ಯಕ್ರತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೋರಟಿದ್ದ ಕಾರ್ಯಕರ್ತರನ್ನು ಪೊಲೀಸರು ಕಂಕನಾಡಿ ಜಂಕ್ಷನ್ ನಲ್ಲಿ ತಡೆದರು.
ನಗರದ ವೇಲೆನ್ಸಿಯಾದಲ್ಲಿರುವ ಐವನ್ ಡಿಸೋಜ ಮನೆ ಬಳಿಯಿಂದ ಧಿಕ್ಕಾರ ಕೂಗಿಕೊಂಡು ಹೊರಟ ಮುಖಂಡರು ಮತ್ತು ಕಾರ್ಯಕರ್ತರು ಕಂಕನಾಡಿ ವೃತ್ತದಲ್ಲಿ ಸಭೆ ನಡೆಸಿದರು. ಬಿಜೆಪಿ ಕಚೇರಿ ವರೆಗೆ ಮೆರವಣಿಗೆ ಮಾಡುವುದಾಗಿ ಮೊದಲು ಹೇಳಿದ್ದರೂ ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಹೀಗಾಗಿ ಮೆರವಣಿಗೆಯನ್ನು ಕಂಕನಾಡಿಯಲ್ಲಿಮುಕ್ತಾಯಗೊಳಿಸಲಾಯಿತು.
250ಕ್ಕಿಂತಲೂ ಅಧಿಕ ಮಂದಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಳಿಕ ಕಂಕನಾಡಿ ಜಂಕ್ಷನ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗಡೆ, ಎಂಎಲ್‌ಸಿ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ ಮತ್ತಿತರರು ಮಾತನಾಡಿದರು.