LATEST NEWS
ಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ, ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!
ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್‌ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾ ಕೇಂದ್ರ ಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆರವಣಿಗೆ ನಡೆಸಿ , ಪಾಲಿಕೆ ಎದುರು ಪ್ರತಿಭಟನೆಯನ್ನು ಆಯೋಜಿಸಿತ್ತು. ಈ ಸಂದರ್ಭ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಪ್ರತಿಭಟನೆ ಉದ್ವಿಗ್ನಗೊಂಡ ಕಾರ್ಯಕರ್ತರಿಂದ ರಸ್ತೆಯಲ್ಲಿ ಸಾಗುತ್ತಿದ್ದ ಖಾಸಾಗಿ ಸಿಟಿ ಬಸ್ ಗೆ ಕಲ್ಲು ತೂರಾಟ ನಡೆಸಲಾಗಿದ್ದು ಇದರಿಂದ ಬಸ್ ನ ಮುಂಭಾಗದ ಗಾಜು ಹುಡಿಯಾಗಿದೆ. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನನಾಕರರನ್ನು ಹತೋಟಿಗೆ ತಂದಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ , ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು. ಕೇಂದ್ರ ಸರ್ಕಾರ ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೆ ಬರಬಹುದು ಎಂದು ಎಚ್ಚರಿಸಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ, ಎಂ ಎಲ್ ಸಿ ಪ್ರಕಾಶ್ ರಾಥೋಡ್, ಮುಖಂಡರಾದ ರಮಾನಾಥ ರೈ, ಹರೀಶ್ ಕುಮಾರ್, ಪದ್ಮರಾಜ್, ಶಕುಂತಳಾ ಶೆಟ್ಟಿ, ಅಶೋಕ್ ರೈ, ಇಬ್ರಾಹಿಮ್ ಕೋಡಿಜಾಲ್, ಮಿಥುನ್ ರೈ , ಪ್ರವೀಣ್ ಚಂದ್ರ ಆಳ್ವ, ಜಿ. ಎ. ಬಾವ, ಶಾಲೆಟ್ಫ ಪಿಂಟೋ, ಪ್ರತಿಭಾ ಕುಳಾಯಿ, ಎಂ.ಎಸ್. ಮುಹಮ್ಮದ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ ಮೊದಲಾದವರುಪಾಲ್ಗೊಂಡಿದ್ದರು.
‘ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕ ಸೀಟಿನ ಹಿಂದೆ ಕುಳಿತ್ತಿದ್ದ ಮಹಿಳೆಗೆ ಗಾಯವಾಗಿದೆ. ನಾಲ್ವರು ಸೇರಿ ಕಲ್ಲು ತೂರಿದ್ದಾರೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದು. ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ನಡೆಸಲಾಗಿದೆ’ ಎಂದು ಬಸ್ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭ ಟೈರುಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಲಾಗಿದೆ.