Connect with us

BELTHANGADI

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ

ಬೆಳ್ತಂಗಡಿ ಅಗಸ್ಟ್ 24: ಬೆಳ್ತಂಗಡಿ ಪ್ರವಾಹ ಸಂತ್ರಸ್ಥರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡಲು ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.


ಕಳೆದ ವರ್ಷ ಜಿಲ್ಲೆಯಲ್ಲಿ ಉಂಟಾದ ಪ್ರವಾಹದ ವೇಳೆ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿದ್ದು, ಈ ಫಂಡ್ ನ ಬಗ್ಗೆ ಸಾರ್ವಜನಿಕರಿಗೆ ಶಾಸಕ ಹರಿಶ್ ಪೂಂಜಾ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೇಸ್ ಕಾರ್ಯಕರ್ತರು ಆರೋಪಿಸಿದ್ದು, ಈ ಹಿನ್ನಲೆ ಇಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಶಾಸಕರ ಕಚೇರಿಗೆ ಮುತ್ತಿಗೆ ಯತ್ನಿಸಿದ್ದಾರೆ.

ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದ್ದು, ಈ ಸಂದರ್ಭ ಮಾಜಿ ಶಾಸಕರು ಹಾಗೂ ಪೊಲೀಸರ ಜೊತೆ ಮಾತಿನ ಚಕಮಕಿ ಕೂಡ ನಡೆಯಿತು.


ಮುತ್ತಿಗೆ ಹಾಕಲು ಬಂದ ಕಾಂಗ್ರೇಸ್ ಕಾರ್ಯಕರ್ತರನ್ನು ಶಾಸಕರ ಕಚೇರಿಯ ಗೇಟ್ ಬಳಿಯೇ ಪೊಲೀಸರು ತಡೆದರು.  ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡಿದರು.

Facebook Comments

comments