Connect with us

DAKSHINA KANNADA

ದ.ಕ.ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಬಾಳೆಕಲ್ಲು ಪಕ್ಷದಿಂದ ಉಚ್ಛಾಟನೆ

ಪುತ್ತೂರು ಎಪ್ರಿಲ್ 25: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಬಾಳೆಕಲ್ಲು ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ.


ರಾಜೇಶ ಬಾಳೆಕಲ್ಲು ಕೆಲ ಸಮಯದಿಂದ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಾ ಬಂದಿದ್ದು, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವಿಟ್ಲ ಹಾಗೂ ಕಾರ್ಯಕರ್ತರು ದೂರಿಕೊಂಡಿದ್ದರು. ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್‌ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿರುವುದಾಗಿಯೂ ಹಾಗೂ ಪಕ್ಷದ ನಾಯಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಈ ವಿಚಾರವಾಗಿ ಪರಿಶೀಲಿಸಲಾಗಿ ಬ್ಲಾಕ್‌ ಕಾಂಗ್ರೆಸ್‌ ದೂರಿನಲ್ಲಿ ಸತ್ಯಾಸತ್ಯತೆ ಇದ್ದು, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಸಾಬೀತಾಗಿರುತ್ತದೆ. ಆದುದರಿಂದ ರಾಜೇಶ ಬಾಳೆಕಲ್ಲುಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ದ.ಕ ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.