ಸುಳ್ಯ ಜೂನ್ 03: ಡಿ.ಕೆ.ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಾಂಗ್ರೇಸ್ ಪಕ್ಷದ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ.

ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಈ ಪೂಜೆ ನೆರವೇರಿಸಲಾಗಿದ್ದು, ಡಿಕೆಶಿ ಅವರು ಮುಖ್ಯಮಂತ್ರಿಯಾದ ಬಳಿಕ ಯಾವುದೇ ವಿಘ್ನ ಅವರನ್ನು ಕಾಡದಿರಲಿ, ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಹಿತ ಕಾಯಲು ಎಲ್ಲಾ ಆಶೀರ್ವಾದಗಳನ್ನು ಚೆನ್ನಕೇಶವ ದೇವರು ಅನುಗ್ರಹಿಸಲಿ ಎನ್ನುವ ಪ್ರಾರ್ಥನೆಯೊಂದಿಗೆ ಪೂಜೆ ನೆರವೇರಿಸಲಾಗಿದೆ.