LATEST NEWS
ಬಲವಂತವಾಗಿ ಅಂಗಡಿ ಮುಚ್ಚಲು ಮುಂದಾದ ಕಾಂಗ್ರೇಸ್ ಕಾರ್ಯಕರ್ತರು
ಬಲವಂತವಾಗಿ ಅಂಗಡಿ ಮುಚ್ಚಲು ಮುಂದಾದ ಕಾಂಗ್ರೇಸ್ ಕಾರ್ಯಕರ್ತರು
ಮಂಗಳೂರು ಸೆಪ್ಟೆಂಬರ್ 10: ತೈಲ ಬೆಲೆ ಏರಿಕೆ ಹಿನ್ನಲೆಯಲ್ಲಿ ಭಾರತ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೇಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಗೂಂಡಾಗಿರಿ ವರ್ತನೆ ತೋರಿದ್ದಾರೆ. ಕಾಂಗ್ರೇಸ್ ಕಾರ್ಯಕರ್ತರಿಗೆ ಸಾತ್ ನೀಡಿರುವ ಜೆಡಿಎಸ್ ಕಾರ್ಯಕರ್ತರು ಕೂಡ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಬೆಂದೂರು ವೆಲ್ ನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿ ಮುಂಭಾಗದಲ್ಲಿ ರಸ್ತೆ ತಡೆದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆ ಮಾಡಿದ್ದಕ್ಕೆ 50ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಅಂಗಡಿಗಳನ್ನು ಮುಚ್ಚಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಎದುರೇ ಗೂಂಡಾಗಿರಿ ನಡೆಸಿರುವ ಘಟನೆ ನಡೆದಿದೆ. ಮೆಡಿಕಲ್ ಮುಚ್ಚಲು ಮುಂದಾದ ಕಾಂಗ್ರೇಸ್ ಕಾರ್ಯಕರ್ತರನ್ನು ಪೊಲೀಸರಿಂದ ಲಾಠಿ ಹಿಡಿದು ಚದುರಿಸಿ ಕಾಂಗ್ರೇಸ್ ಕಾರ್ಯಕರ್ತರನ್ನು ಕುತ್ತಿಗೆ ಪಟ್ಟಿ ಹಿಡಿದು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಕಂಕನಾಡಿ ಬೆಂದೂರು ವೆಲ್ ರಸ್ತೆಯಲ್ಲಿ ರಸ್ತೆ ತಡೆದು ಮೆರವಣಿಗೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.