ಉಡುಪಿ ಜನವರಿ 25: ಕಂಟೈನರ್ ಲಾರಿಯೊಂದು ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ಮಣಿಪಾಲದ ಅವಿನಾಶ್ ಎಂದು ಗುರುತಿಸಲಾಗಿದೆ. ಅವಿನಾಶ್ ಗೆಳೆಯರೊಂದಿಗೆ ಸೇರಿ ಸ್ಕೂಟರ್ ನಲ್ಲಿ ಮಲ್ಪೆ ಬೀಚ್ ನಿಂದ ಮಣಿಪಾಲಕ್ಕೆ ತೆರಳುತ್ತಿದ್ದರು. ಗೆಳೆಯರು ಅವರ ಸ್ಕೂಟರ್ ನಲ್ಲಿ ಮುಂದಕ್ಕೆ ಹೋಗಿದ್ದರು. ಸಿಗ್ನಲ್ ನಲ್ಲಿದ್ದ ಇವರು ಅದನ್ನು ದಾಟಿ ಮುಂದಕ್ಕೆ ಹೋಗುವ ವೇಳೆ ಪಕ್ಕದಲ್ಲಿ ಹೋಗುತ್ತಿದ್ದ ಕಂಟೈನರ್ ನ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಸಾವನ್ಬಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



