DAKSHINA KANNADA
ಪಿಕಪ್ಗೆ ಡಿಕ್ಕಿ ಹೊಡೆದ ಕಂಟೇನರ್ ಲಾರಿ : ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಸುಳ್ಯ, ಜೂನ್ 10: ಪಿಕಪ್ ವಾಹನಕ್ಕೆ ಕಂಟೇನರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಸಂಪಾಜೆ ಕಡೆಗೆ ತೆರಳುತ್ತಿದ್ದ ಪಿಕಪ್ಗೆ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೇನರ್ ಲಾರಿಯು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪಿಕಪ್ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೆರಾಜೆಯ ಪಾಲೆಗುಂಡಿಯ ದಿನಕರ (32) ಎಂಬವರು ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಕಂಟೇನರ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.