LATEST NEWS
ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ(ಅಕ್ಟೋಬರ್ 26) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ(ಅಕ್ಟೋಬರ್ 26) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ ಅಕ್ಟೋಬರ್ 25:ಕ್ಯಾರ್ ಚಂಡಮಾರುತದ ಹಿನ್ನಲೆ ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ (26.10.2019) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ.
ಕ್ಯಾರ್ ಚಂಡಮಾರುತದ ಹಿನ್ನಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಭಾರಿ ಗಾಳಿ ಮಳೆಯಾಗಿದೆ. ಅಲ್ಲದೆ ನಾಳೆಯೂ ಕೂಡ ಜಿಲ್ಲೆಯಾದ್ಯಂತ ಗಂಟೆಗೆ 40-45ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ನಾಳೆಯೂ (26.10.2019) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದೆ. ಅಲ್ಲದೆ ಮೀನುಗಾರರು ಕಡಲಿಗಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಪ್ರವಾಸಿಗರಿಗೂ ಕಡಲ ಕಿನಾರೆಯಲ್ಲಿ ನೀರಿಗಿಳಿಯದಂತೆ ನಿರ್ಬಂಧ ಹೇರಿದೆ.
