DAKSHINA KANNADA
ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ, ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ..!
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ.
ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್ ಗೆ ಹೋಗಿದ್ದರು ಎನ್ನಲಾಗಿದೆ. ಸುಮಾರು 5 ರಿಂದ ಆರು ಜನರ ತಂಡ ರಾತ್ರಿ 11 ರ ಸುಮಾರಿಗೆ ನಗರದ ವಾಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲವೆಂದು ಹೇಳಲಾಗಿದೆ.
ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಕೆ.ಅಶ್ರಫ್ ಖಂಡನೆ :
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾರ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ.ಪೊಲೀಸರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಮಾಜಿ ಮೇಯರ್ ಕೆ. ಅಶ್ರಫ್ ಹೇಳಿದ್ದಾರೆ. ಸಂಘ ಪರಿವಾರ ತನ್ನ ಕುಕೃತ್ಯವನ್ನು ಈ ರೀತಿಯಲ್ಲಿ ಪ್ರದರ್ಶಿಸಿದೆ. ಓರ್ವ ಜನಪ್ರತಿನಿಧಿಯನ್ನೇ ಗುರಿಯಾಗಿಸಿ ಇಂತಹ ಕೃತ್ಯ ನಡೆಸುವುದರಲ್ಲಿ ಸಂಘಿ ಕೈವಾಡವಿದ್ದು ಇಂತಹ ಕೃತ್ಯ ಪ್ರಜಾ ಪ್ರಭುತ್ವದ ಅಡಿಪಾಯಕ್ಕೆ ಅಪಾಯ. ನೇರ ಎದುರಿಸಲು ತಯಾರಿಲ್ಲದ ಕೃತ್ಯದಾರರು ಇರುಳಲ್ಲಿ ಬಂದು ಹೇಡಿತನ ಮೆರೆದಿದ್ದಾರೆ. ಪ್ರಜಾ ಸತ್ತಾತ್ಮಕ ವಿಧದ ಮೂಲಕ ಪ್ರತಿಕ್ರಿಯಿಸುವ ಮನಸ್ಸಿಲ್ಲದ ದುಷ್ಕರ್ಮಿಗಳು ಈ ರೀತಿಯ ಮಾರ್ಗ ಅನುಸರಿಸಿರುವುದು ಖಂಡನೀಯ ಎಂದು ಹೇಳಿದ್ದಾರೆ.
Pingback: ನನ್ನ ವಿರುದ್ಧದ ಸುಳ್ಳು ಆರೋಪ ಸಂದರ್ಭ ಟಿ.ಜೆ.ಅಬ್ರಹಾಂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ': ಪ್ರಮೋದ್ ಮ