Connect with us

LATEST NEWS

ಪೊಲೀಸರಿಗೆ ತ್ರಿಶೂಲಗಳನ್ನು ಕೊಟ್ಟು ಹಿಂಸೆ ಧಿಕ್ಷೆ ಕೊಡಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು ಅಕ್ಟೋಬರ್ 17: ದಸರಾ ಹಬ್ಬ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ಧರಿಸಿರುವ ಬಟ್ಟೆ ಇದೀಗ ವಿವಾದಕ್ಕೆ ಕಾರಣವಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಉಡುಪಿಯ ಕಾಪು ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೇಸರಿ ಬಣ್ಣದ ಬಟ್ಟೆ ಧರಿಸುವುದರ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಧಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಸಿಎಂ ಬೊಮ್ಮಾಯಿ ಅವರೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು.
ಒಂದೆಡೆ ಅಮಾಯಕ ಯುವಕ, ಯುವತಿಯರ ಮೇಲೆ ಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಬಹಿರಂಗ ಬೆಂಬಲ ರಾಜ್ಯದಲ್ಲಿ ಸರ್ಕಾರ ಇದೆಯೇ?


ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಬೊಮ್ಮಾಯಿ ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.

 

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಯೋಗಿ ಆದಿತ್ಯನಾಥ್‌ ಅವರ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ. ಸಿಎಂ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ. ಎಂದು ಟ್ವಿಟ್ ಮಾಡಿದ್ದಾರೆ.