LATEST NEWS
ಕುಕ್ಕರ್ ಬಾಂಬ್ ಸ್ಪೋಟ – ಶಂಕಿತ ಉಗ್ರ ಶಾರೀಕ್ ವಿರುದ್ದ ಜಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು ನವೆಂಬರ್ 30 : ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಇಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ನಗರದ ಎನ್ ಐಎ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ.
ಶಿವಮೊಗ್ಗದ ಮೊಹಮ್ಮದ್ ಶಾರೀಕ್ ಮತ್ತು ಸೈಯದ್ ಶಾರೀಕ್ ಬಂಧಿತರು. ಉಗ್ರ ಸಂಘಟನೆ ಮುಖಂಡರ ಜೊತೆ ಆನ್ ಲೈನ್ ನಲ್ಲಿ ಸಂಪರ್ಕ ಹೊಂದಿದ್ದ ಇವರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು ಎಂದು ಎನ್ ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ಉಗ್ರರು ಕುಕ್ಕರ್‌ನಲ್ಲಿ ಸುಧಾರಿತ ಸ್ಫೋಟಕ ತೆಗೆದುಕೊಂಡು, ಆಟೋದಲ್ಲಿ ಹೋಗಿ ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು ನಡೆಸಿದ್ದರು.

2022ರ ನವೆಂಬರ್ 19ರಂದು ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡ ಬಾಂಬ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಫೋಟಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪುಗೊಂಡಿದ್ದು ಈ ಸ್ಫೋಟದಿಂದ ಬಯಲಾಗಿತ್ತು. ಶಿವಮೊಗ್ಗದಲ್ಲಿ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ಬಂಧನವಾಗುತ್ತಿದ್ದಂತೆ ಶಾರೀಕ್ ಅಲ್ಲಿಂದ ಪರಾರಿಯಾಗಿ ಮಂಗಳೂರು, ಮೈಸೂರು, ಕೇರಳ, ತಮಿಳುನಾಡು ಸುತ್ತಾಡಿಕೊಂಡಿದ್ದ. ಹಿಂದೂ ವೇಷ ಧರಿಸಿ ಮೈಸೂರಿನಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿಂದ ತನ್ನ ಉಗ್ರ ಕೃತ್ಯ ಮುಂದುವರೆಸಿದ್ದ.
ಸ್ಥಳೀಯ ಪೊಲೀಸರು ಶಾರೀಕ್ ನನ್ನು ಬಂಧಿಸಿದ್ದರು. ಎನ್ ಐಎ ಅಧಿಕಾರಗಳು ಪ್ರಕರಣದ ತನಿಖೆ ವಹಿಸಿಕೊಂಡು ಜುಲೈನಲ್ಲಿ ಇಬ್ಬರನ್ನೂ ಬಂಧಿಸಿದ್ದರು. ಸ್ಫೋಟಕ್ಕೆ ಬೇಕಾದ ಬಿಡಿ ಭಾಗಗಳನ್ನು ಸೈಯದ್ ಶಾರೀಕ್ ತಂದುಕೊಟ್ಟಿದ್ದ ಎಂದು ಆರೋಪ ಪಟ್ಟಿಯಲ್ಲಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.