Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆ ಇಂದು ಬರೊಬ್ಬರಿ 10 ಸಾವು …149 ಕೊರೊನಾ ಪ್ರಕರಣ

ಮಂಗಳೂರು ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 149 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 10 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 149 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 6542 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 82 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3343 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ಜಿಲ್ಲೆಯಲ್ಲಿ 10 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 190 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -79, ಬಂಟ್ವಾಳ – 16, ಸುಳ್ಯ -1 ಬೆಳ್ತಂಗಡಿ – 21, ಪುತ್ತೂರು -20, ಹೊರ ಜಿಲ್ಲೆಯವರು – 12.

Facebook Comments

comments