LATEST NEWS
ಕೊರೊನಾಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ 9ನೇ ಬಲಿ

ಮಂಗಳೂರು ಜೂ.23: ಕೊರೊನಾಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, 70 ವರ್ಷದ ವೃದ್ದರೊಬ್ಬರು ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾಕ್ಕರೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿದೆ.
ಇಂದು ಮೃತಪಟ್ಟ ವ್ಯಕ್ತಿ ಬೆಂಗಳೂರಿನಲ್ಲಿದ್ದು ಶೀತ ಕೆಮ್ಮು ಶುರುವಾದ ಬಳಿಕ ಸ್ಥಳೀಯ ವೈದ್ಯರಿಂದ ಔಷಧ ಪಡೆದಿದ್ದರು. ಜೂನ್ ಎರಡನೆ ವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗಂಟಲಿನ ದ್ರವದ ಮಾದರಿ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದ ಬಳಿಕ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವಿಗೀಡಾಗಿದ್ದಾರೆ. ವಿಪರೀತ ಧೂಮಪಾನಿಯಾಗಿದ್ದ ಇವರಿಗೆ ಮಧುವೇಹ ಇತ್ತು.
