LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 1175 ಮಂದಿಗೆ ಕೊರೊನಾ ಸೊಂಕು….ಒಂದು ಸಾವು

ಮಂಗಳೂರು, ಎಪ್ರಿಲ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 1175 ಮಂದಿಗೆ ಕೊರೋನ ಪಾಸಿಟಿವ್ ಕಾಣಿಸಿಕೊಳ್ಳುವ ಮೂಲಕ ಈವರೆಗಿನ ಪಾಸಿಟಿವ್ ಪ್ರಕರಣ ಸಂಖ್ಯೆಯ ದಾಖಲೆಯನ್ನು ಮುರಿದಿದೆ.
ಜಿಲ್ಲೆಯಲ್ಲಿ ಗುರುವಾರ 1,175 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ಇಂದು ಜಿಲ್ಲೆಯಲ್ಲಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 756 ಮಂದಿ ಬಲಿಯಾದಂತಾಗಿದೆ.

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 43,904 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು 5,662 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.