LATEST NEWS
ದೇಶದಲ್ಲಿ ಕೊರೊನಾ ಅಬ್ಬರ ಒಂದೇ ದಿನ 2.47 ಲಕ್ಷ ಹೊಸ ಪ್ರಕರಣ ಪತ್ತೆ….!!
ನವದೆಹಲಿ:ಕೊರೊನಾ ಸೊಂಕಿನ ಮೂರನೇ ಅಲೆಗೆ ಭಾರತ ತತ್ತರಿಸಿದ್ದು, ನಿನ್ನೆ ಒಂದೇ ದಿನ ಭಾರತದಲ್ಲಿ 2,47,417 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 442 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 84,825 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,47,15,361ಕ್ಕೆ ತಲುಪಿದೆ.
ಭಾರತದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಗುರುವಾರ) ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
You must be logged in to post a comment Login