DAKSHINA KANNADA
ಕೊರೊನಾ ನಿಯಂತ್ರಣಕ್ಕೆ ವಿಟ್ಲ ಪೇಟೆ ಸೇರಿದಂತೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್

ವಿಟ್ಲ ಜೂನ್ 17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ ಸೇರಿದಂತೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ನಿರ್ಣಯಿಸಲಾಗಿದೆ.
ಕೊರೊನಾ ಪ್ರಕರಣಕ್ಕೆ ಏರಿಕೆ ಹಿನ್ನಲೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಾಂತಿ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಕಾರ್ಯಪಡೆಯ ತುರ್ತು ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಶನಿವಾರ ಮತ್ತು ಭಾನುವಾರ ಸಂಪೂರ್ಣ ಬಂದ್ ಆಗಿರುತ್ತದೆ. ಹಾಲು ಅಂಗಡಿಯನ್ನು ಬೆಳಿಗ್ಗೆ 9 ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.

ಔಷಧ ಅಂಗಡಿ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ. ಸುರುಳಿಮೂಲೆ ಭಾಗದಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದ್ದು, ಒಂದೇ ಮನೆಯಲ್ಲಿ 15 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಬರುವಂತೆ ವಿನಂತಿಸಲಾಗುವುದು. ಅವರು ಒಪ್ಪದಿದ್ದರೆ ಕಾಲೊನಿಯನ್ನು ಸೀಲ್‌ಡೌನ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.