Connect with us

    LATEST NEWS

    ದೇಶದಲ್ಲಿ ಏರಿಕೆಯಲ್ಲಿ ಕೊರೊನಾ ಪ್ರಕರಣ – 24 ಗಂಟೆಗಳಲ್ಲಿ 11 ಸಾವಿರಕ್ಕೂ ಅಧಿಕ ಪ್ರಕರಣ ದಾಖಲು

    ನವದೆಹಲಿ ಎಪ್ರಿಲ್ 14: ಕೊರೊನಾ ಪ್ರಕರಣಗಳು ಮತ್ತೆ ದೇಶದಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 11,109 ಹೊಸ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.


    ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸದ್ಯ 49,622 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,42,16,583ಕ್ಕೆ ತಲುಪಿದ್ದು, 5,31,064 ಮಂದಿ ಮೃತಪಟ್ಟಿದ್ದಾರೆ. ಚೇತರಿಕೆ ಪ್ರಮಾಣ ಶೇ 98.71 ರಷ್ಟಿದ್ದು, ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ದೇಶದಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿವೆ. ಗುರುವಾರ 10,158 ಹಾಗೂ ಬುಧವಾರ 7,830 ಪ್ರಕರಣಗಳು ವರದಿಯಾಗಿದ್ದವು.

    ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

    ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲಾ ಐಎಲ್‌ಐ (ಶೀತ ಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ) ಮತ್ತು ಸಾರಿ (ತೀವ್ರ ಉಸಿರಾಟದ ಸಮಸ್ಯೆ) ಪ್ರಕರಣಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹಾಗೆಯೇ ರೋಗ ಲಕ್ಷಣವುಳ್ಳ ಅಂತರರಾಜ್ಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲಾವಾರು ಪರೀಕ್ಷೆ ಗುರಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ತಲುಪಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply