Connect with us

UDUPI

ಉಡುಪಿಯಲ್ಲಿ ಕೊರೊನಾಗೆ ನಾಲ್ಕನೇ ಬಲಿ

ಉಡುಪಿ ಜುಲೈ 12: ಉಡುಪಿಯಲ್ಲಿ ಕೊರೊನಾ ವೈರಸ್ ನಾಲ್ಕನೆ ಬಲಿ ಪಡೆದಿದೆ. ಕೊರೊನಾ ಸೊಂಕಿತರಾಗಿದ್ದ ದಾವಣಗೆರೆ ಮೂಲಕ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


ಸುಮಾರು 70 ವರ್ಷದ ದಾವಣಗೆರೆ ಮೂಲದ ವೃದ್ಧರೊಬ್ಬರನ್ನು ಮೂರು ದಿನಗಳ ಹಿಂದೆ ಅನಾರೋಗ್ಯದ ಕಾರಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಗಂಟಲದ್ರವದ ಪರೀಕ್ಷೆ ನಡೆಸಿದಾಗ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಜುಲೈ 10ರಂದು ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.