LATEST NEWS
ಉಡುಪಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ

ಉಡುಪಿ ಜೂನ್ 19 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದ್ದು, ಮುಂಬೈನಿಂದ ಜಿಲ್ಲೆಗೆ ಆಗಮಿಸಿ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ.
ಮೃತ ವ್ಯಕ್ತಿ ತೆಕ್ಕಟ್ಟೆ ನಿವಾಸಿಯಾಗಿದ್ದು, ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದಿಂದ ಕುಂದಾಪುರಕ್ಕೆ ಆಗಮಿಸಿದ್ದರು. ಮನೆಗೆ ಬಂದ ನಾಲ್ಕೆ ಗಂಟೆಯಲ್ಲಿ ಕುಸಿದು ಬಿದ್ದು ಸಾವನಪ್ಪಿದ್ದಾರೆ.
ಮುಂಬೈನಿಂದ ಉಡುಪಿಗೆ ಆಗಮಿಸಿದಾಗ ವ್ಯಕ್ತಿಯ ಸಂಪೂರ್ಣ ತಪಾಸಣೆ ನಡೆಸಲಾಗಿದ್ದು, ಯಾವುದೇ ಜ್ವರದ ಲಕ್ಷಣ ಇಲ್ಲದ ಕಾರಣ ಅವರನ್ನು ಹೋಂ ಕ್ವಾರಂಟೈನ್ ನಲ್ಲಿಡಲು ಸೂಚಿಸಲಾಗಿತ್ತು.
ಮರಣಕ್ಕೆ ಕಾರಣ ಪೋಸ್ಟ್ ಮಾರ್ಟಂ ನಿಂದ ತಿಳಿಯಬೇಕಾಗಿದ್ದು, ಸದ್ಯ ಗಂಟಲ ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಇರೋದು ಗೊತ್ತಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
