LATEST NEWS
ಕೊರೊನಾ ಗೆದ್ದ ದೇಶದ ಅತಿ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ
ಮಂಗಳೂರು ಜುಲೈ 20: ದೇಶದ ಧೀಮಂತ ರಾಜಕಾರಣಿ ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಕೊರೊನಾದಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬಂಟ್ವಾಳದಲ್ಲಿರುವ 83ರ ಹರೆಯ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರಿಗೆ ಜುಲೈ 4 ರಂದು ಕೊರೊನಾ ಸೊಂಕು ಪತ್ತೆಯಾಗಿತ್ತು. ಮನೆಯ ಕೆಲಸದವರಿಂದ ಪೂಜಾರಿಯವರೆಗೆ ಕೊರೊನಾ ಸೊಂಕು ಹರಡಿದ್ದು, ಮನೆಯ ಇತರ ಮೂವರು ಸದಸ್ಯರಿಗೂ ಕೊರೊನಾ ಸೊಂಕು ದೃಡಪಟ್ಟಿತ್ತು. ಈ ಹಿನ್ನಲೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಇಂದು ಜನಾರ್ಧನ ಪೂಜಾರಿಯವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೊರೊನಾ ಜಯಿಸಿದ ಅತಿ ಹಿರಿಯ ರಾಜಕಾರಣಿ ಇವರಾಗಿದ್ದಾರೆ. ಕೊರೊನಾದಿಂದ ಗುಣಮುಖರಾದ ನಂತರ ಮಾಧ್ಯಮ ಪ್ರಕಟಣೆ ನೀಡಿರುವ ಪೂಜಾರಿಯವರು ತನ್ನ ಆರೋಗ್ಯಕ್ಕೆ ಪ್ರಾರ್ಥಿಸಿದ ಎಲ್ಲ ಬಂಧುಗಳಿಗೆ , ಹಿತೈಷಿಗಳಿಗೆ ಹಾಗೂ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಮತ್ತು ಸಂಸ್ಥೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಅಲ್ಲದೆ ಕೊರೊನಾ ರೋಗಕ್ಕೆ ಯಾರೂ ಭಯಪಡಬೇಕಾಗಿಲ್ಲ. ಪ್ರತಿಯೊಬ್ಬರು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಿ ಹಾಗೂ ರೋಗ ನಿರೋಧ ಶಕ್ತಿಯನ್ನು ವೃದ್ದಿಸಲು ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ, ಪ್ರತಿಯೊಬ್ಬರು ಜಾಗೃತೆ ವಹಿಸಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೊಬ್ಬರು ಮಾಸ್ಕ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಜನರಿಗೆ ಸಂದೇಶ ನೀಡಿದ್ದಾರೆ.