LATEST NEWS
ಕೊರೊನಾ ಆತಂಕ : ದಕ್ಷಿಣಕನ್ನಡ ಜಿಲ್ಲೆ ಗಡಿಭಾಗಗಳಲ್ಲಿ ಬಿಗಿ ತಪಾಸಣೆ
ಮಂಗಳೂರು, ನ. 28: ಮತ್ತೆ ಕೇರಳದ ಗಡಿ ಭಾಗದವರಿಗೆ ಕೊರೊನಾ ಆತಂಕ ಪ್ರಾರಂಭವಾಗಿದ್ದು, ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ರೂಪಾಂತರಿ ಪತ್ತೆಯಾದ ಬೆನ್ನಲ್ಲೆ ರಾಜ್ಯ ಸರಕಾರ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗಗಳಲ್ಲಿ ವಾಹನ ಸವಾರರ ಬಿಗಿ ತಪಾಸಣೆ ನಡೆಸಲು ಆದೇಶಿಸಿದೆ.
ಕೇರಳದಿಂದ ಬಂದವರಿಂದ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದ್ದು, ಕ್ಲಸ್ಟರ್ ಆಗಿರುವ ಕಡೆಯಲ್ಲಿ ಕೇರಳದಿಂದ ಬಂದಿರುವ ಪಾರಾಮೆಡಿಕಲ್ ಸಿಬ್ಬಂದಿಗಳು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರುಗಳಲ್ಲಿ ಕೇರಳ ಗಡಿಭಾಗಗಳಲ್ಲಿ ಸಂಪೂರ್ಣವಾಗಿ ಎಚ್ಚರಿಕೆ ವಹಿಸಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದು, ಕಡ್ಡಾಯವಾಗಿ ಕೊರೋನಾ ಟೆಸ್ಟ್ ಮಾಡಿ ನೆಗೆಟಿವ್ ಇದ್ದರೆ ಮಾತ್ರ ಬಿಡಬೇಕೆಂದು, ಕೊರೋನಾ ಲಸಿಕೆಯ ಎರಡೂ ಡೋಸ್ ಗಳಾಗಿರಬೇಕೆಂದು, ಹಾಗೂ ಹಗಲು-ರಾತ್ರಿ ನಿಗಾ ಇರಿಸಲು, ಟೆಸ್ಟ್ ಗಳನ್ನು ಹೆಚ್ಚಿಸಲು ಸೂಚನೆಯನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಹಿನ್ನಲೆ ಕೇರಳದಿಂದ ದ.ಕ. ಜಿಲ್ಲಾಪ್ರವೇಶಕ್ಕೆ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂ ದಿರುವುದನ್ನು ಕಡ್ಡಾಯಗೊ ಳಿಸಲಾಗಿದೆ. ಗಡಿ ಪ್ರದೇಶದಲ್ಲಿದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸಲು ಸಿಎಂ ಸೂಚಿಸಿದ್ದಾರೆ. ಇದೀಗ ಮೂರು ಪಾಳಿಯಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲು ಸೂಚಿಸಿರುವಂತೆಯೇ ಗಡಿ ಭಾಗಗಳಲ್ಲಿ ಪೊಲೀಸರು ಆರೋ ಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತಿಯಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.