LATEST NEWS
ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ : ಪೊಲೀಸರಿಗೆ ವರ್ಕ್ಫ್ರಮ್ ಹೋಮ್!
ಮುಂಬೈ, ಫೆಬ್ರವರಿ 24 : ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು ಕಂಡು ಬರುತ್ತಿವೆ.ಇನ್ನೊಂದೆಡೆ ಮುಂಬೈನಲ್ಲೂ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೇ ಮತ್ತೆ ಲಾಕ್ಡೌನ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಮಹಾ ಸರ್ಕಾರ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅಲ್ಲಿನ ಕೆಳ ಹಂತದ ಪೊಲೀಸರಿಗೆ ವರ್ಕ್ ಫ್ರಮ್ ಹೋಮ್ ಗೆ ಅವಕಾಶ ನೀಡಿ ಅಚ್ಚರಿ ಮೂಡಿಸಿದೆ. ಈ ಕುರಿತು ಆದೇಶ ಹೊರಡಿಸಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಎ ಮತ್ತು ಬಿ ಶ್ರೇಣಿಯ ಅಧಿಕಾರಿಗಳಿಗೆ ಹಾಜರಾತಿ ಕಡ್ಡಾಯ ಇರುತ್ತದೆ.
ಸಿ ಮತ್ತು ಡಿ ವೃಂದದ ಸಿಬ್ಬಂದಿಯಲ್ಲಿ ಶೇ 25 ರಷ್ಟು ಮಾತ್ರ ಬೆಳಿಗ್ಗೆ 9 ರಿಂದ ಸಂಜೆ ರವರೆಗೆ ಹಾಗೂ ಇನ್ನುಳಿದ ಶೇ 25 ರಷ್ಟು ಕಚೇರಿ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಅವಕಾಶ ಇರುತ್ತದೆ. ಕರೊನಾ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ 6218 ಹೊಸ ಕರೊನಾ ಸೋಂಕು ಪತ್ತೆ ಪ್ರಕರಣಗಳು ವರದಿಯಾಗಿವೆ. 61 ಜನ ಮೃತಪಟ್ಟಿದ್ದಾರೆ. ಇದುವರೆಗೆ ಆ ರಾಜ್ಯದಲ್ಲಿ 21,12,312 ಜನರಿಗೆ ಸೋಂಕು ತಗುಲಿತ್ತು. ಇದರಲ್ಲಿ 53409 ಸಕ್ರಿಯ ಪ್ರಕರಣಗಳು ವರದಿಯಾಗಿವೆ.