LATEST NEWS
ಧಾರ್ಮಿಕ ಕೇಂದ್ರಗಳಿಗೆ ಕರೋನಾ ಭೀತಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಧಾರ್ಮಿಕ ಕೇಂದ್ರಗಳಿಗೆ ಕರೋನಾ ಭೀತಿ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಮಂಗಳೂರು ಮಾರ್ಚ್ 10:ಕರೋನಾ ಭೀತಿ ಈಗ ಧಾರ್ಮಿಕ ಕೇಂದ್ರಗಳ ಮೇಲೂ ಬಿದ್ದಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಕರೋನಾ ಭೀತಿ ಹಿನ್ನಲೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಕ್ಷೇತ್ರಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಕ್ತರು ಹೆಚ್ಚು ಭೇಟಿ ನೀಡಲ್ಪಡುವ ಮುಖ್ಯ ಧಾರ್ಮಿಕ ಕೇಂದ್ರಗಳಾಗಿವೆ. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಬರುತ್ತಿದ್ದ ಹೊರ ರಾಜ್ಯಗಳ, ಜಿಲ್ಲೆಗಳ ಪ್ರವಾಸಿಗರ ಸಂಖ್ಯೆ ಭಾರೀ ಕಡಿಮೆಯಾಗಿದೆ.
ಕೊರೊನಾ ವೈರಸ್ ಭೀತಿ ಶುರುವಾಗುವ ಮುಂಚೆ ಈ ಎರಡೂ ಕ್ಷೇತ್ರಗಳಿಗೆ ಸ್ಥಳೀಯ ಮತ್ತು ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಕೊರೊನಾ ಎಫೆಕ್ಟ್ ನಂತರ ಸ್ಥಳೀಯ ಪ್ರವಾಸಿಗರಲ್ಲಿ ಸ್ವಲ್ಪ ಮಟ್ಟಿಗೆ ಕಡಿಮೆಯಾದರೆ, ವಿದೇಶಿ, ಹೊರ ರಾಜ್ಯ ಮತ್ತು ಜಿಲ್ಲೆಗಳ ಪ್ರವಾಸಿಗರ ಆಗಮನದಲ್ಲಿ ಗಣನೀಯ ಇಳಿಕೆಯಾಗಿದೆ.
ಇದರಿಂದಾಗಿ ಪ್ರವಾಸಿಗರನ್ನೇ ನಂಬಿಕೊಂಡು ವ್ಯಾಪಾರ ಮಾಡುತ್ತಿದ್ದವರ ಆದಾಯದಲ್ಲಿ ಅರ್ಧಕ್ಕರ್ಧ ಕುಸಿತ ಕಂಡಿದೆ. ಹೀಗಾಗಿ ಕ್ಷೇತ್ರಗಳ ಸುತ್ತಮುತ್ತಲಿನ ವ್ಯಾಪಾರಸ್ಥರು ಸಂಕಷ್ಟದಲ್ಲಿದ್ದಾರೆ.