LATEST NEWS
ಶಂಕಿತ ಕೊರೊನಾ ವೈರಸ್ ರೋಗಿಯ ಪರೀಕ್ಷಾ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಜಿ.ಜಗದೀಶ್

ಶಂಕಿತ ಕೊರೊನಾ ವೈರಸ್ ರೋಗಿಯ ಪರೀಕ್ಷಾ ವರದಿ ನೆಗೆಟಿವ್- ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಮಾರ್ಚ್ 7: ಉಡುಪಿ ಜಿಲ್ಲಾಸ್ಪತ್ರಗೆ ದಾಖಲಾಗಿದ್ದ ಶಂಕಿತ ಕರೋನಾ ವೈರಸ್ ರೋಗಿಯ ಪರೀಕ್ಷಾ ವರದಿ ನೆಗೆಟಿವ್ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಇಸ್ರೆಲ್ ನಿಂದ ಉಡುಪಿಗೆ ಆಗಮಿಸಿದ್ದ 75 ವರ್ಷದ ವ್ಯಕ್ತಿ ಕೆಮ್ಮು ಹಾಗೂ ಶೀತದ ತೊಂದರೆ ಹಿನ್ನಲೆ ಉಡುಪಿ ಜಿಲ್ಪಾಸ್ಪತ್ರೆಗೆ ದಾಖಲಾಗಿದ್ದರು. ಈ ವ್ಯಕ್ತಿಗೆ ಶಂಕಿತ ಕೊರೊನಾ ವೈರಸ್ ಲಕ್ಷಣಗಳ ಹಿನ್ನೆಲೆಯಲ್ಲಿ, ಈ ರೋಗಿಯ ಥ್ರೋಟ್ ಸ್ವಾಬ್ ನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಲಾಗಿತ್ತು.

ಇಂದು ಆ ವ್ಯಕ್ತಿಯ ವೈದ್ಯಕೀಯ ವರದಿಯು ಜಿಲ್ಲಾಡಳಿತ ಕೈ ಸೇರಿದ್ದು, ವರದಿಯಲ್ಲಿ ನೆಗೆಟಿವ್ ಎಂದು ಬಂದಿರುವುದರಿಂದ, ಜಿಲ್ಲೆಯ ಸಾರ್ವಜನಿಕರು ಯಾವುದೇ ಆತಂಕಗೊಳಗಾಗುವ ಅಗತ್ಯವಿಲ್ಲ. ಆದರೆ ಈ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸಾರ್ವಜನಿಕರು, ಕೊರೊನಾ ವೈರಸ್ ಕುರಿತಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ, ಆರೋಗ್ಯ ಇಲಾಖೆಯ ಉಚಿತ ಹೆಲ್ಪ್ಲೈಕನ್ ಸಂಖ್ಯೆ 104 ಅಥವಾ 080-2228541/ 22374658 ಅಥವಾ ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕ ದೂ.ಸಂ. 0820-2525561 ನ್ನು ಸಂರ್ಕಿಸಬಹುದು. ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಭಯ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.