Connect with us

    LATEST NEWS

    ಸತತ 12 ದಿನಗಳ ಬಳಿಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಾಖಲು

    ಸತತ 12 ದಿನಗಳ ಬಳಿಕ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಾಖಲು

    ಮಂಗಳೂರು ಎಪ್ರಿಲ್ 17: ದೆಹಲಿಯಿಂದ ಹಿಂತಿರುಗಿದ್ದ ಉಪ್ಪಿನಂಗಡಿ ಮೂಲದ ಯುವಕನಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು. ಕಳೆದ ಕೆಲವು ದಿನಗಳಿಂದ ಯಾವುದೇ ಕೊರೊನಾ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ದ.ಕ ಜನತೆಯಲ್ಲಿ ಈ ಪ್ರಕರಣ ಮತ್ತೆ ಆತಂಕಕ್ಕೆ ಕಾರಣವಾಗಿದೆ.

    ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿಯಾಗಿರುವ ಯುವಕ ವೈಯಕ್ತಿಕ ಕೆಲಸದ ಹಿನ್ನೆಲೆ ದೆಹಲಿಗೆ ತೆರಳಿದ್ದರು ಬಳಿಕ ಮಾರ್ಚ್ 21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು, ಈ ಹಿನ್ನಲೆ ದೆಹಲಿಯ ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ವ್ಯಕ್ತಿಯನ್ನು ಪತ್ತೆ ಮಾಡಿದ ಜಿಲ್ಲಾಡಳಿತ 14 ದಿನಗಳ ಕಾಲ ಕ್ವಾರೆಂಟೈನ್ ನಲ್ಲಿ ಇಡಲಾಗಿತ್ತು. ಎಪ್ರಿಲ್ 2 ರಂದು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಇತನ ವರದಿ ನೆಗೆಟಿವ್ ಬಂದಿದ್ದು, ಆ ಬಳಿಕ ಎಪ್ರಿಲ್ 13 ರಂದು ಕಳುಹಿಸಿದ ಎರಡನೇ ಮಾದರಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

    ತಕ್ಷಣ ಯುವಕನನ್ನು ವೆನ್ ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ 13 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದ್ದು, ಈ ಪೈಕಿ 9 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *