LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ
ಮಂಗಳೂರು ಎಪ್ರಿಲ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕರೊನೊ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಮೂಲದ 67 ವರ್ಷ ವಯಸ್ಸಿನ ಮಹಿಳೆಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಗಂಟಲು ದ್ರವ ತೆಗೆದು ಕೊವಿಡ್ 19 ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವರದಿ ಬಂದಿದ್ದು, ಕೊರೊನಾ ಇರುವುದು ದೃಢಪಟ್ಟಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, 12 ಮಂದಿ ಗುಣಮುಖರಾಗಿದ್ದರು. ಮೂರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
You must be logged in to post a comment Login