LATEST NEWS
ಉಡುಪಿಯಲ್ಲಿ ಕೊರೋನಾ ಮಹಾಸ್ಪೋಟ: 170 ಮಂದಿಯಲ್ಲಿ ಕೊರೊನಾ ಪಾಸಿಟಿವ್
ಉಡುಪಿ, ಮಾರ್ಚ್ 21 : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ.
ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಮಣಿಪಾಲದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ.ಎಂಐಟಿ ಕ್ಯಾಂಪಸ್ ನಲ್ಲಿ ಇದುವರೆಗೂ ಒಟ್ಟು 318 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ.
ಜಿಲ್ಲೆಯಲ್ಲಿ ಸದ್ಯ 358 ಸಕ್ರೀಯ ಪ್ರಕರಣಗಳಿದ್ದು ಈವರೆಗೆ 190ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ ಎಂದು ಉಡುಪಿ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.