Connect with us

BELTHANGADI

ಉಜಿರೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಕೊರೊನಾ ಸೊಂಕು

ಬೆಳ್ತಂಗಡಿ ಜೂನ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶಕ್ಕೂ ಕೊರೊನಾ ಲಗ್ಗೆಯಿಟ್ಟಿದ್ದು, ಉಜಿರೆಯ ಪೆಟ್ರೋಲ್ ಬಂಕ್ ಸಿಬ್ಬಂದಿ ಯುವತಿಯೊಬ್ಬಳಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಉಜಿರೆ ಪೆಟ್ರೋಲ್ ಬಂಕ್ ನ್ನು ಸೀಲ್ ಡೌನ್ ಮಾಡಲಾಗಿದೆ.


ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿದೆ.
ಸದ್ಯ ಉಜಿರೆ ಪೆಟ್ರೋಲ್ ಬಂಕ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡವರಲ್ಲಿ ಈಗ ಆತಂಕ ಶುರುವಾಗಿದೆ.

Facebook Comments

comments