Connect with us

    LATEST NEWS

    ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೊರೋನಾ ಪಾಸಿಟಿವ್

    ನವದೆಹಲಿ, ಜನವರಿ 04: ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕಳೆದ 10 ದಿನಗಳಿಂದ ಕೋವಿಡ್-19 ಮತ್ತು ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೂ ಕೊರೋನಾ ಸೋಂಕು ವಕ್ಕರಿಸಿದೆ.

    ನನಗೆ ಕೊರೋನಾದ ಸೌಮ್ಯ ಗುಣಲಕ್ಷಣಗಳಿದ್ದು ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆ. ನನ್ನ ಜೊತೆ ಇತ್ತೀಚಿನ ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಸುರಕ್ಷತೆ ದೃಷ್ಟಿಯಿಂದ ಪ್ರತ್ಯೇಕವಾಗಿ ಉಳಿಯಿರಿ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಳಿಕೊಂಡಿದ್ದಾರೆ.

    ನಿನ್ನೆ ದೆಹಲಿಯಲ್ಲಿ 4 ಸಾವಿರದ 099 ಹೊಸ ಪ್ರಕರಣಗಳೊಂದಿಗೆ ದೆಹಲಿಯಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣ ವರದಿಯಾಗಿತ್ತು. ಅಧಿಕೃತ ಹೇಳಿಕೆಯ ಪ್ರಕಾರ, ದೆಹಲಿಯಲ್ಲಿ ಕೊರೋನಾ ಪಾಸಿಟಿವ್ ಪ್ರಮಾಣವು ಶೇಕಡಾ 6.46ರಷ್ಟಿದ್ದು, 6 ಸಾವಿರದ 288 ಕೋವಿಡ್-19 ರೋಗಿಗಳು ಮತ್ತು ಕೋವಿಡ್ ಸೋಂಕಿನ ಶಂಕಿತರು ಹೋಮ್ ಐಸೋಲೇಶನ್‌ನಲ್ಲಿದ್ದಾರೆ.

    ನಿನ್ನೆ ಅತಿಹೆಚ್ಚು ಕೋವಿಡ್ ಸೋಂಕಿತರ ಸಾವು ಕೂಡ ದೆಹಲಿಯಲ್ಲಿ ಸಂಭವಿಸಿದೆ. ಇತ್ತೀಚಿನ ಓಮಿಕ್ರಾನ್ ರೂಪಾಂತರಿ ಸೋಂಕು ಕೂಡ ದೆಹಲಿಯಲ್ಲಿ ಹೆಚ್ಚು ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply