Connect with us

    LATEST NEWS

    ಉಡುಪಿ – ಎರಡು ವಾರದೊಳಗೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇಕಡ 1 ಕ್ಕಿಂತ ಕಡಿಮೆ ಮಾಡಲು ಗುರಿ – ಜಿಲ್ಲಾಧಿಕಾರಿ

    ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ ರಚಿಸಲಾಗಿರುವ ವಿವಿಧ ಕಾರ್ಯಪಡೆ ತಂಡಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಕರ‍್ಮಾ ರಾವ್ ಎಂ ಸೂಚಿಸಿದರು.


    ಕೋವಿಡ್‌ನಿಂದ ಅಪಾಯವಿಲ್ಲ, ಇದರ ಹರಡುವಿಕೆ ಕಡಿಮೆಯಾಗಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಕಂಡು ಬರುತ್ತಿದೆ, ಸಭೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲನೆಯಾಗದಿರುವುದು ಹಾಗೂ ಮಾಸ್ಕ್ ಧರಿಸದೇ ಇರುವುದು ಎಲ್ಲೆಡೆ ಕಂಡುಬರುತ್ತಿದೆ, ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕು. ಮಾಸ್ಕ್ ಧರಿಸದೇ ಇರುವುದು, ಸಾಮಾಜಿಕ ಅಂತರ ಪಾಲನೆಯಾಗದ ಸ್ಥಳಗಳಲ್ಲಿ, ಸಂಬಂಧಪಟ್ಟವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಂಡವನ್ನು ವಿಧಿಸಿ. ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಗರಸಭೆ, ಪುರಸಭೆ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಜಾಗೃತಿ ಮೂಡಿಸಲು ಅಭಿಯಾನ ಆಯೋಜಿಸಿ, ದಂಡ ವಿಧಿಸಿ, ಜಿಲ್ಲೆಯಲ್ಲಿ ಕೋವಿಡ್ ಶೂನ್ಯ ಪ್ರಕರಣಗಳು ಬರುವವರೆಗೂ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ  ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

    ಜಿಲ್ಲೆಗೆ ಕೇರಳ ಮತ್ತು ಮಹಾರಾಷ್ಟದಿಂದ ಆಗಮಿಸುವವರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಪರಿಶೀಲಿಸಿ. ಕೇರಳದಿಂದ ಬರುವವರನ್ನು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಬೇಕು.
    ಕೊಲ್ಲೂರು ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೇರಳದಿಂದ ಪ್ರವಾಸಿಗರು ಆಗಮಿಸಿಲಿದ್ದು, ಅಲ್ಲಿ ಪ್ರತ್ಯೇಕ ಕೋವಿಡ್ ತಪಾಸಣಾ ಕೇಂದ್ರ ಆರಂಭಿಸಿ ಪರಿಶೀಲನೆ ನಡೆಸಬೇಕು ಮತ್ತು ಅಗತ್ಯಬಿದ್ದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ತೆರೆಯಿರಿ. ಕೊಲ್ಲೂರು ಪ್ರವೇಶದ್ವಾರದಲ್ಲಿ ಮತ್ತು ದೇವಸ್ಥಾನದ ವೆಬ್‌ಸೈಟ್‌ನಲ್ಲಿ ಕನ್ನಡ, ಮಲೆಯಾಳಂ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕೇರಳದಿಂದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ನೆಗೆಟಿವ್ ವರದಿ ಹೊಂದಿರುವ ಬಗ್ಗೆ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿರುವ ಬಗ್ಗೆ ಮಾಹಿತಿಯನ್ನು ಅಳವಡಿಸಿ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply