Connect with us

    LATEST NEWS

    ಕೊರೊನಾ ಸೊಂಕಿತರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕಡ್ಡಾಯ ಕ್ವಾರಂಟೈನ್ – ಉಡುಪಿ ಜಿಲ್ಲಾಧಿಕಾರಿ

    ಉಡುಪಿ ಅಗಸ್ಟ್ 05: ಜಿಲ್ಲೆಯಲ್ಲಿ ಕರೋನಾ ಸೋಂಕಿನ ಸರಪಳಿಯನ್ನು ತುಂಡರಿಸಿ, ಕೋವಿಡ್ 19 ವೈರಾಣುವಿನ ಹರಡುವಿಕೆಯನ್ನು ತಗ್ಗಿಸಿ , ಜಿಲ್ಲೆಯು ಜನರು ಕೋವಿಡ್ -19 ರ ಭಾದೆಗೆ ಒಳಗಾಗದಂತೆ ತಪ್ಪಿಸಲು, ಆಗಸ್ಟ್ 5 ರ ಗುರುವಾರದಿಂದ, ಕೋವಿಡ್-19 ಪಾಸಿಟಿವ್ ವ್ಯಕ್ತಿಗಳನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ಯಾರಂಟೈನ್ (Covid Care Centre ) ಗೆ ಸ್ಥಳಾಂತರಗೊಳಿಸುವ0ತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.


    ಅಂತಹ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005, ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ 2020 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.


    ಗರ್ಭಿಣಿಯರು, ಅಶಕ್ತರು, ಹಾಗೂ ಇತರ ವಿಶೇಷ ಪ್ರಕರಣಗಳಿದ್ದಲ್ಲಿ, ಅಂತಹವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಂದ ವಿನಾಯಿತಿ ನೀಡುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

     

    ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಿರುವ ಹಿನ್ನಲೆ ಕಠಿಣ ಕ್ರಮಕ್ಕೆ ಮುಂದಾಗಿದ್ದು. ಸೆಕ್ಷನ್ 144(3) ಜಾರಿ ಮಾಡಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ. ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆ ಸೆಕ್ಷನ್ 144(3) ಜಾರಿಮಾಡಿದ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5:00 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಜಿಲ್ಲೆಯಲ್ಲಿ ಪಬ್ ಗಳಿಗೆ ಅವಕಾಶ ಇಲ್ಲ ಈಜುಕೊಳದಲ್ಲಿ ತರಬೇತಿ ಮಾತ್ರ, ಸಾರ್ವಜನಿಕ ಪ್ರವೇಶ ಇಲ್ಲ, ಮೈದಾನ, ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ, ಯಾವುದೇ ರಾಜಕೀಯ, ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶ ನಿರಾಕರಿಸಲಾಗಿದೆ. ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ, ದೇವಸ್ಥಾನದಲ್ಲಿ ಜಾತ್ರೆ ಉತ್ಸವ ಮೆರವಣಿಗೆಗೆ ಅವಕಾಶವನ್ನು ನಿರಾಕರಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *